ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಆಕೆಯೆನ್ನು ಕೊಲೆ ಮಾಡಿದ್ದ ವ್ಯಕ್ತಿಗೆ ನ್ಯಾಯಾಲಯ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. 2016ರಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಅಪರಾಧಿ ಮುತ್ತಪ್ಪ ಬಸಪ್ಪ ಸವದಿ 10,000 ರೂಪಾಯಿ ದಂಡ ಪಾವತಿಸುವಂತೆಯೂ ಸೂಚಿಸಿದೆ.
ನ್ಯಾಯಾಧೀಶ ಮಂಜುನಾಥ್, ತೀರ್ಪಿನ ಪ್ರತಿಯನ್ನು ಬೆಂಗಳೂರು ನಗರ ಜಿಲ್ಲೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಕಳುಹಿಸಿ, ಮೃತ ಮಹಾದೇವಿಯ ಮಕ್ಕಳಿಗೆ ಪರಿಹಾರ ನೀಡಲು ಸೂಚಿಸಿದ್ದಾರೆ.


