nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೇಟಿಗೆ ಅವಕಾಶ ಕೇಳಿದ್ದರೆ ನಾನೇ ನೀಡುತ್ತಿದ್ದೆ, ಮುನಿರತ್ನ ಸೀನ್ ಕ್ರಿಯೇಟ್ ಮಾಡುವ ಅಗತ್ಯವಿರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ October 12, 2023

    ಭೇಟಿಗೆ ಅವಕಾಶ ಕೇಳಿದ್ದರೆ ನಾನೇ ನೀಡುತ್ತಿದ್ದೆ, ಮುನಿರತ್ನ ಸೀನ್ ಕ್ರಿಯೇಟ್ ಮಾಡುವ ಅಗತ್ಯವಿರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

    By adminOctober 12, 2023No Comments3 Mins Read
    dk shivakumar

    ಬೆಂಗಳೂರು: “ಶಾಸಕ ಮುನಿರತ್ನ ಅವರು ನನ್ನ ಭೇಟಿಗೆ ಮೊದಲೇ ಅವಕಾಶ ಕೇಳಿದ್ದರೆ ಕೊಡುತ್ತಿದ್ದೆ. ಕಂಬಳ ಕರೆಪೂಜೆ (ಗುದ್ದಲಿಪೂಜೆ) ಕಾರ್ಯಕ್ರಮದ ಬಳಿ ಬಂದು  ಸೀನ್ ಕ್ರಿಯೇಟ್ ಮಾಡುವ ಅವಶ್ಯಕತೆ ಇರಲಿಲ್ಲ. ಅವರನ್ನು ಕಾಲಿಗೆ ಬೀಳಿಸಿಕೊಳ್ಳಲು ನಾನೇನು ಮಠದ ಸ್ವಾಮೀಜಿಯೇ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

    ಸದಾಶಿವನಗರದ ನಿವಾಸಲ್ಲಿ ಶಾಸಕ ಮುನಿರತ್ನ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,“ಶಾಸಕ ಮುನಿರತ್ನ ಅವರು ರಾಜರಾಜೇಶ್ವರಿ ಕ್ಷೇತ್ರಕ್ಕೆ ಅನುದಾನದ ವಿಚಾರವಾಗಿ ಚರ್ಚೆ ನಡೆಸಿದರು.  ʼದ್ವೇಷದ ರಾಜಕಾರಣ’ ಎಂದು ಹೇಳಿದರು. ಅದಕ್ಕೆ ನಾನು, “ಬಿಜೆಪಿ ಸರ್ಕಾರ ಇದ್ದ ವೇಳೆ ಕಾಂಗ್ರೆಸ್ ಶಾಸಕರ ಅನುದಾನಕ್ಕೆ ಏಕೆ ಕತ್ತರಿ ಹಾಕಿದ್ದರು? ಹೋಗಿ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರನ್ನೇ ಕೇಳಿನೋಡಿ. ಕನಕಪುರಕ್ಕೆ ಬಂದಿದ್ದ ವೈದ್ಯಕೀಯ ಕಾಲೇಜನ್ನು ಹೇಗೆ ತೆಗೆದರು? ಅಂತಾ. ಅದನ್ನು ಯಾವ ರಾಜಕಾರಣ ಎಂದು ಕರೆಯುತ್ತಾರೆ”ಎಂದು ಮುನಿರತ್ನ ಅವರಿಗೆ ಕೇಳಿದ್ದಾಗಿ ತಿಳಿಸಿದರು.


    Provided by
    Provided by

    “ಅದಕ್ಕೆ ಮುನಿರತ್ನ ಅವರು ನಾನು ಚಿಕ್ಕವನು, ಇದಕ್ಕೆಲ್ಲ ನನ್ನನ್ನ ಮುಂದೆ ಬಿಡಬೇಡಿ ಎಂದರು. ಇನ್ನೂ ಅನೇಕ ವಿಚಾರಗಳು ಚರ್ಚೆಯಾದವು. ಅದನ್ನೆಲ್ಲಾ ಮಾಧ್ಯಮಗಳಿಗೆ ಹೇಳಲು ಆಗುವುದಿಲ್ಲ, ನಿಮಗೆ ಅದೆಲ್ಲಾ ಅರ್ಥವಾಗಿರುತ್ತದೆ. ಕಾಲಿಗೆ ಬೀಳುವುದೆಲ್ಲ ಇಟ್ಟುಕೊಳ್ಳಬೇಡಿ, ಸುಮ್ಮನೆ ಹೊರಡಿ ಎಂದು ಅವರಿಗೆ ಹೇಳಿದೆ” ಎಂದರು.

    ಸರ್ಕಾರದಿಂದಲೇ ಕಾಮಗಾರಿಗಳ ತನಿಖೆ ನಡೆಸಲಾಗುವುದೇ ಎನ್ನುವ ಪ್ರಶ್ನೆಗೆ “ಈಗಾಗಲೇ ತನಿಖೆ ನಡೆಯುತ್ತಿದೆಯಲ್ಲ. ಯಾರು ಸರಿಯಾಗಿ ಕೆಲಸ ಮಾಡಿದ್ದಾರೋ ಅವರಿಗೆ ಬಿಲ್ ಬಿಡುಗಡೆ ಮಾಡಲಾಗುವುದು. ಬೊಮ್ಮಾಯಿ ಸಾಹೇಬರು ವಿಧಾನಸಭೆಯಲ್ಲಿ ವರದಿ ನೀಡಿ, ಹೇಳಿಕೆ ನೀಡಿದ್ದರು. ಮುನಿರತ್ನ ಅವರು ಸಹ ನನ್ನ ಕ್ಷೇತ್ರದಲ್ಲಿ ಅನ್ಯಾಯ ನಡೆದಿದೆ ಎಂದು ಪತ್ರ ಬರೆದಿದ್ದರು. ಅದನ್ನೆಲ್ಲಾ ತನಿಖೆಗೆ ನೀಡಿದ್ದೇವೆ. ಬೊಮ್ಮಾಯಿ ಅವರು ಹಾಗೂ ಇವರು ಹೇಳಿದ್ದಕ್ಕೆ ಲೋಕಾಯುಕ್ತ ತನಿಖೆಗೆ ನೀಡಿದ್ದೇವೆ. ವರದಿ ಬಂದ ಬಳಿಕ ಕಾನೂನು ಪ್ರಕಾರವಾಗಿ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳುತ್ತೇವೆ” ಎಂದು ತಿಳಿಸಿದರು.

    ಕಾಮಗಾರಿಗಳ ಪಟ್ಟಿ ತಂದುಕೊಡುವುದಾಗಿ ಮುನಿರತ್ನ ಅವರು ಹೇಳಿರುವ ಬಗ್ಗೆ ಕೇಳಿದಾಗ, “ಯಾವ ಕಾಮಗಾರಿ, ಯಾವುದು ಆದ್ಯತೆಯ ಮೇಲೆ ನಡೆಯಬೇಕು, ಯಾವ ಕೆಲಸ ಎಂದು ಪಟ್ಟಿ ತಂದುಕೊಡಿ ಎಂದು ಹೇಳಿ ಕಳಿಸಿದ್ದೇನೆ”ಎಂದು ಹೇಳಿದರು.

    ಡಿ.ಕೆ ಸಹೋದರರು ಏನು ಮಾಡಿಕೊಂಡು ಬಂದಿದ್ದಾರೋ ನಾನು ಅದನ್ನೇ ಮಾಡುತ್ತಿದ್ದೇನೆ ಎಂಬ ಮುನಿರತ್ನ ಹೇಳಿಕೆ ಬಗ್ಗೆ ಕೇಳಿದಾಗ  “ನಾನು ಎಕ್ಸಿಬಿಟರ್, ನಟ, ನಿರ್ಮಾಪಕ ಅಲ್ಲ. ಆದರೆ ನಮ್ಮಲ್ಲಿ ಹಾಗೂ ನಮ್ಮ ಲೋಕಸಭಾ ಕ್ಷೇತ್ರದಲ್ಲಿ ಬಹಳಷ್ಟು ಜನ ನಟರು, ನಿರ್ಮಾಪಕರು, ವಿತರಕರು ಸೇರಿಕೊಂಡು ಬಿಟ್ಟಿದ್ದಾರೆ. ನಾನು ಈ ಹಿಂದೆ ಪ್ರದರ್ಶಕ ಆಗಿದ್ದೆ, ಈಗಲ್ಲ” ಎಂದು ತಿಳಿಸಿದರು.

    ಡಿ.ಕೆ.ಶಿವಕುಮಾರ್ ಅವರನ್ನು ಒಂದಷ್ಟು ಜನ ಹಾದಿ ತಪ್ಪಿಸುತ್ತಿದ್ದಾರೆ. ಆ ಮಾಹಿತಿಯನ್ನು ಅವರಿಗೆ ನೀಡುತ್ತೇನೆ ಎಂಬ ಮುನಿರತ್ನ ಹೇಳಿಕೆ ಬಗ್ಗೆ ಕೇಳಿದಾಗ, “ನನಗೆ ಮಾಹಿತಿಯನ್ನ ನೀವು ಕೊಟ್ಟರು, ಅವರು, ಯಾರೇ ಕೊಟ್ಟರು ತೆಗೆದುಕೊಳ್ಳುತ್ತೇನೆ” ಎಂದರು.

    ಅರಮನೆ ಮೈದಾನದಲ್ಲಿ ಮುನಿರತ್ನ ಹೈಡ್ರಾಮಾ ಇದಕ್ಕೂ ಮುನ್ನ ನಗರದ ಅರಮನೆ ಮೈದಾನದಲ್ಲಿ ನಡೆದ ಬೆಂಗಳೂರು ಕಂಬಳ- ನಮ್ಮ ಕಂಬಳದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡುತ್ತಿದ್ದಾಗ, ಅಲ್ಲಿಗೆ ಬಂದ ಮುನಿರತ್ನ ಅವರು ಮನವಿ ಸಲ್ಲಿಸಲು ಬಂದಿರುವುದಾಗಿ ಹೇಳಿ ಸಭೆಯ ಬಳಿ ಕೆಲಕಾಲ ಗೊಂದಲ  ಮೂಡಿಸಿದರು.

    ಇದನ್ನು ಗಮನಿಸಿದ ಡಿ.ಕೆ.ಶಿವಕುಮಾರ್ ವೇದಿಕೆ ಮೇಲಿಂದಲೇ ಪ್ರತಿಕ್ರಿಯಿಸಿ, “ನಾಟಕ ಮಾಡಬೇಕು ಎಂದು ಇಲ್ಲಿಗೆ ಬಂದಿದ್ದಾರೆ, ಅವರನ್ನು ನಿಧಾನಕ್ಕೆ ಭೇಟಿಯಾಗೋಣ. ನಾಟಕ ಮಾಡುವ, ಸಿನಿಮಾ ತೆಗೆಯುವ ನಿರ್ಮಾಪಕರಲ್ಲವೇ! ಅವರದ್ದು ಒಂದೊಂದು ಕಥೆ ಇರುತ್ತದೆ, ಇವನ್ನೆಲ್ಲಾ ಅರಗಿಸಿಕೊಳ್ಳೊಣ. ನಡೆ ಮುಂದೆ, ನಡೆ ಮುಂದೆ ನುಗ್ಗಿ ನಡೆ ಮುಂದೆ ಎಂದು ನಾವು ಮುನ್ನಡೆಯಬೇಕು” ಎಂದು ತಿಳಿಸಿದರು.

    “ಅವರದ್ದು ಏನೋ ತೊಂದರೆ ಇದೆ. ಆದರೆ ಈ ಕಾರ್ಯಕ್ರಮಕ್ಕೆ ಅಡ್ಡಿಯಾಗದಂತೆ ಅದನ್ನು ಬಗೆಹರಿಸಿ. ಬೆಂಗಳೂರಿನಲ್ಲಿ ಕಂಬಳ ಮಾಡಬೇಕು ಎಂದು ಮಂಗಳೂರಿನಿಂದ ಜನರು ಬಂದು  ಉತ್ಸಾಹದಿಂದ ಇಲ್ಲಿ ಸೇರಿದ್ದಾರೆ. ಈ ಕಾರ್ಯಕ್ರಮಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಿ” ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಅವರಿಗೆ ಹೇಳಿದರು.

    ಕಾರ್ಯಕ್ರಮ ಮುಗಿಸಿ ಹೊರಟ ಡಿಸಿಎಂ ಶಿವಕುಮಾರ್ ಅವರು, ಮನವಿ ಸಲ್ಲಿಸಲು ಬಂದ ಮುನಿರತ್ನ ಅವರಿಗೆ “ಮಧ್ಯಾಹ್ನ ಮನೆಯ ಬಳಿ ಬನ್ನಿ, ಈ ಕುರಿತು ಚರ್ಚೆ ಮಾಡೋಣ” ಎಂದರು. ಈ ಸಂದರ್ಭದಲ್ಲಿ ಶಾಸಕ ಮುನಿರತ್ನ ಅವರು ಶಿವಕುಮಾರ್ ಅವರ ಕಾಲಿಗೆ ಬಿದ್ದು, ಮನವಿ ಪತ್ರ ನೀಡಿದರು.

    ಅರಮನೆ ಮೈದಾನದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಅವರು, “ಮುನಿರತ್ನ ಅವರು ಪ್ರತಿಭಟನೆ ಮಾಡಲು ಬಂದಿದ್ದಾರೆ ಎಂದು ಹೇಳಿದ್ದೀರಿ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡಲು ಅವಕಾಶವಿದೆ. ಕಂಬಳ ಗುದ್ದಲಿ ಪೂಜೆಯ ಬಳಿ ಬಂದು ʼಸೀನ್ ಕ್ರಿಯೇಟ್ʼ ಮಾಡುವ ಅವಶ್ಯಕತೆ ಇರಲಿಲ್ಲ. ದಸರಾ ಕ್ರೀಡಾಕೂಟ ಉದ್ಘಾಟನೆಗೆ ಮೈಸೂರಿಗೆ ಹೋಗಬೇಕಾಗಿದ್ದು, ಸಮಯ ಸಿಕ್ಕರೆ ಭೇಟಿಗೆ ಅವಕಾಶ ನೀಡುತ್ತೇನೆ”ಎಂದರು.

    ಕಾರ್ಯಕ್ರಮ ಮುಗಿದ ನಂತರ ಶಿವಕುಮಾರ್ ಅವರು ತಮ್ಮ ಮನೆಗೆ ಬಂದು ಭೇಟಿ ಮಾಡಿ ತಮ್ಮ ಮನವಿ ಬಗ್ಗೆ ಚರ್ಚಿಸುವಂತೆ ತಿಳಿಸಿದರು. ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಧಾವಿಸಿದ ಮುನಿರತ್ನ ಅವರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಡಿಸಿಎಂ ಅವರ ಬಳಿ ಚರ್ಚೆ ನಡೆಸಿದರು.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ತುಮಕೂರು: ನಗರದ ಕನ್ನಡ ಭವನದಲ್ಲಿ ಕನ್ನಡ ಪರ ಸಂಘಟನೆಯಾದ ವಿಜಯ ಸೇನೆ ವತಿಯಿಂದ ಆಯೋಜಿಸಲಾಗಿದ್ದ ವೀರ ರಾಣಿ ಬೆಳವಾಡಿ ಮಲ್ಲಮ್ಮ…

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.