nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್
    • ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಡ್ ಶೆಡ್ಡಿಂಗ್ ಬಗ್ಗೆ ಟೀಕೆ ಮಾಡುವ ಬಿಜೆಪಿ, ತನ್ನ ಅವಧಿಯಲ್ಲಿ ಎಷ್ಟು ಪ್ರಮಾಣ ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
    ರಾಜ್ಯ ಸುದ್ದಿ October 12, 2023

    ಲೋಡ್ ಶೆಡ್ಡಿಂಗ್ ಬಗ್ಗೆ ಟೀಕೆ ಮಾಡುವ ಬಿಜೆಪಿ, ತನ್ನ ಅವಧಿಯಲ್ಲಿ ಎಷ್ಟು ಪ್ರಮಾಣ ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    By adminOctober 12, 2023No Comments2 Mins Read
    dk shivakumar

    ಬೆಂಗಳೂರು: “ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿದ್ಯುತ್ ಕೊರತೆ ಎದುರಾಗಿದೆ. ಈ ವಿಚಾರವಾಗಿ ಟೀಕೆ ಮಾಡುವ ಬಿಜೆಪಿ ನಾಯಕರು ತಮ್ಮ ಅಧಿಕಾರ ಅವಧಿಯಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಎಷ್ಟು ಪ್ರಮಾಣ ಹೆಚ್ಚಳ ಮಾಡಿದ್ದರು ಎಂಬುದನ್ನು ಹೇಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

    ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದರು. “ಮಳೆ ಬಿದ್ದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ, ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದೆ ನಮ್ಮ ಸರ್ಕಾರ ಇದ್ದಾಗ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ನಾವು ಆಗ 10 ರಿಂದ 13 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿದ್ದೆವು. ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಈ ಪರಿಸ್ಥಿತಿ ಬಂದಿದೆ” ಎಂದು ತಿಳಿಸಿದರು.


    Provided by
    Provided by

    “ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ರಾಜ್ಯದ ಅಣೆಕಟ್ಟುಗಳಲ್ಲಿ ನೀರಿನ ಲಭ್ಯತೆ ಕಡಿಮೆ ಇದೆ. ಬರಗಾಲ ಎದುರಾದಾಗ ವಿದ್ಯುತ್ ಉತ್ಪಾದನೆ ಕುಸಿಯುತ್ತದೆ. ಅಲ್ಲದೇ ಪ್ರತಿವರ್ಷ ಶೇ 10 ರಿಂದ 15 ರಷ್ಟು ಬೇಡಿಕೆ ಹೆಚ್ಚಾಗುವುದು ವಾಡಿಕೆ. ನಮ್ಮ ಸರ್ಕಾರ ಇನ್ನು 10 ಸಾವಿರ ಎಕರೆಯಲ್ಲಿ ಸೋಲಾರ್ ವಿದ್ಯುತ್ ಹಾಗೂ ವಿಂಡ್ ಪವರ್ ಉತ್ಪಾದನೆಗೆ ಕಾರ್ಯಕ್ರಮ ರೂಪಿಸುತ್ತಿದೆ” ಎಂದು ತಿಳಿಸಿದರು.

    “ರೈತರಿಂದಲೂ ವಿದ್ಯುತ್ ಬೇಡಿಕೆ ಪ್ರಮಾಣ ಹೆಚ್ಚಾಗಿದೆ. ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ. ಈಗಾಗಲೇ ನಮ್ಮ ಸಚಿವರು ಕಾರ್ಯಪ್ರವೃತ್ತರಾಗಿದ್ದು, ಸಮಸ್ಯೆ ಬಗೆಹರಿಸುತ್ತೇವೆ. ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ಕೇಂದ್ರ ವಿದ್ಯುತ್ ಸಚಿವರ ಬಳಿ ಚರ್ಚೆ ಮಾಡಿ ಕೇಂದ್ರಿಯ ಗ್ರಿಡ್‌ಗಳಿಂದ ವಿದ್ಯುತ್ ಪೂರೈಕೆಗೆ ಮನವಿ ಮಾಡಿದ್ದಾರೆ”ಎಂದರು.

    ಕಾವೇರಿ ವಿಚಾರವಾಗಿ ಮೇಲ್ಮನವಿ ಸಲ್ಲಿಸುತ್ತೇವೆ. ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೂ ಮುನ್ನ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, “ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಮತ್ತೊಮ್ಮೆ ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದೆ ಮೇಲ್ಮನವಿ ಸಲ್ಲಿಸುತ್ತೇವೆ. ಬೆಂಗಳೂರಿನ ಸುತ್ತಮುತ್ತ ಮಳೆ ಸುರಿದಿರುವ ಪರಿಣಾಮ ಬಿಳಿಗುಂಡ್ಲುವಿಗೆ ಹರಿಯುವ ನೀರಿನ ಪ್ರಮಾಣ ಅಲ್ಪ ಪ್ರಮಾಣದಲ್ಲಿ ಸರಿದೂಗಿದೆ. ಮಳೆ ಸುರಿದಿದ್ದು ಎರಡು ಮೂರು ದಿನ ಮಾತ್ರ. 200 ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, ಸಂಕಷ್ಟದಲ್ಲಿ ಇದ್ದೇವೆ” ಎಂದು ಹೇಳಿದರು.

    ಮಹಾರಾಷ್ಟ್ರ ಮತ್ತೆ ಗಡಿ ವಿಚಾರದಲ್ಲಿ ಖ್ಯಾತೆ ತೆಗೆದಿರುವ ವಿಚಾರವಾಗಿ ಕೇಳಿದಾಗ, “ನಮ್ಮ ರಾಜ್ಯದಲ್ಲಿ ನಾವು ಮಾಡುತ್ತೇವೆ, ಅವರ ರಾಜ್ಯದಲ್ಲಿ ಅವರು ಮಾಡಲಿ. ಸುಮ್ಮನೆ ಅಶಾಂತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದ್ದು, ನಾವು ಅದಕ್ಕೆ ಅವಕಾಶ ನೀಡುವುದಿಲ್ಲ” ಎಂದು ತಿಳಿಸಿದರು

    admin
    • Website

    Related Posts

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ನೀಡಿರುವ ವಾಗ್ದಾನವಾಗಿದ್ದು, ಆರ್ಥಿಕ ಹೊರೆಯಾದರೂ ಸಹ ಕೊಟ್ಟ…

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.