‘ಅನ್ನಭಾಗ್ಯ’ ಯೋಜನೆಯಡಿ ವಿತರಿಸುವ ಪಡಿತರವನ್ನು 75 ವರ್ಷ ದಾಟಿದವರ ಮನೆ ಬಾಗಿಲಿಗೇ ತಲುಪಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.
ಕೋರಿಕೆಯಷ್ಟು ಅಕ್ಕಿಯನ್ನು ಎಫ್ ಸಿಐ ನಿಗದಿಪಡಿಸಿದ ದರದಲ್ಲಿ (ಪ್ರತಿ ಕೆ. ಜಿಗೆ 1 34) ಪೂರೈಸಲು ಛತ್ತೀಸಗಢ ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳು ಒಪ್ಪಿಗೆ ನೀಡಿವೆ.
ಇದೇ ತಿಂಗಳಿನಿಂದ ನಗದು ಬದಲು ಪೂರ್ಣ ಪ್ರಮಾಣದಲ್ಲಿ ಅಕ್ಕಿ ಪೂರೈಸಲು ನಿರ್ಧರಿಸಿರುವ ಇಲಾಖೆ, ಪಡಿತರ ವಿತರಣೆಯಲ್ಲಿ ಹಿರಿಯ ನಾಗರಿಕರಿಗೆ ಅನುಕೂಲ ಮಾಡಿಕೊಡಲು ಮತ್ತೊಂದು ನಿರ್ಧಾರ ತೆಗೆದುಕೊಂಡಿದೆ.


