ಟ್ವಿಟರ್, ಟೆಲಿಗ್ರಾಮ್, ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಕೇಂದ್ರ ಸರಕಾರ ಪ್ರಮುಖ ನಿರ್ದೇಶನಗಳನ್ನು ನೀಡಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಕಂಟೆಂಟ್ ಇದ್ದರೆ ಅದನ್ನು ತಕ್ಷಣವೇ ತೆಗೆದುಹಾಕುವಂತೆ ಆದೇಶಿಸಲಾಗಿದೆ.
ಇಲ್ಲವಾದಲ್ಲಿ ಸುರಕ್ಷಿತ ಬಂದರಿನ ಸ್ಥಾನಮಾನ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಯಾವುದೇ ಕ್ರಮ ಕೈಗೊಳ್ಳದಿದ್ದರೆ, ಐಟಿ ಕಾಯ್ದೆಯ ಸೆಕ್ಷನ್ 79 ರ ಅಡಿಯಲ್ಲಿ ಸುರಕ್ಷಿತ ಬಂದರು ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಕೇಂದ್ರ ಹೇಳಿದೆ.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯಗಳನ್ನ ಶಾಶ್ವತವಾಗಿ ಅಳಿಸಬೇಕು ಮತ್ತು ಅನುಮತಿಸಬಾರದು. ಅಲ್ಗಾರಿದಮ್ ನಲ್ಲಿ ಬದಲಾವಣೆ ಮಾಡಿ ಅಳವಡಿಸಬೇಕು ಎಂದು ತಿಳಿಸಲಾಗಿದೆ.


