ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ನೌಕರರು ಮೃತಪಟ್ಟರೆ ಅವರ ಕುಟುಂಬಕ್ಕೆ 2 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ರಾಜ್ಯ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆಯನ್ನು ನಡೆಸಿದ ಬಳಿಕ ಅವರು ಮಾಹಿತಿ ನೀಡಿದರು. ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಅರ್ಚಕರು ಮತ್ತು ನೌಕರರಿಗೆ ಆರೋಗ್ಯ ಕಾರ್ಡ್ ವಿತರಿಸಲಾಗುವುದು. ನೋಂದಣಿ ಶುಲ್ಕವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲಾಗುವುದು ಎಂದರು.


