ಚಿಂದಿ ಆಯುವವರ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಅವರನ್ನುಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನಕ್ಕೆ ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ.
ಕರ್ನಾಟಕ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಸಾಯಿ ಕರ್ಮಚಾರಿ ಮಕ್ಕಳಿಗೆ ನಿಗದಿ ಮಾಡಿರುವ ಶೇ.5 ಮೀಸಲಾತಿ ಅಡಿಯಲ್ಲಿ ಚಿಂದಿ ಆಯುವವರ ಮಕ್ಕಳಿಗೆ 6ನೇ ತರಗತಿಗೆ ಪ್ರವೇಶಾತಿ ಕಲ್ಪಿಸುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.


