ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಧನ ಸಹಾಯ ನೀಡಲು ಪೊಲೀಸ್ ಕಲ್ಯಾಣ ನಿಧಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪೊಲೀಸ್ ಅಧಿಕಾರಿ/ಸಿಬ್ಬಂದಿ ಮತ್ತು ಲಿಪಿಕ ಸಿಬ್ಬಂದಿ ತಮ್ಮ ಮಕ್ಕಳ ವಿದ್ಯಾಭ್ಯಾಸದ ಮಾಹಿತಿಯನ್ನು ಎಕ್ಸೆಲ್ ಫಾರ್ಮೆಟ್ ನಲ್ಲಿ ಭರ್ತಿ ಮಾಡಿ ಸಾಫ್ಟ್ ಕಾಪಿ ಮತ್ತು ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ ಡಿಸಿಪಿ ಕಚೇರಿಯ ಮುಖಾಂತರ ಅ. ೨೦ ರೊಳಗೆ ಸಲ್ಲಿಸಲು ಸೂಚಿಸಲಾಗಿದೆ.


