nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ October 16, 2023

    ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    By adminOctober 16, 2023No Comments2 Mins Read
    siddharamayya

    ಮೈಸೂರು: ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾಗಿದ್ದು, ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗುತ್ತಿಗೆದಾರರ ಮನೆಯಲ್ಲಿ ಹಣಪತ್ತೆಯಾಗಿರುವ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ದುಡ್ಡು ವಸೂಲಿ ಮಾಡುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಮುಖ್ಯಮಂತ್ರಿತಗಳು ಉತ್ತರ ನೀಡುತ್ತಾ,  ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರದೋ ಮನೆಯಲ್ಲಿ ಹಣ ಪತ್ತೆಯಾಗಿದ್ದು, ಇದಕ್ಕೆ ರಾಜಕೀಯ ನಂಟು ಹಾಕುವುದು ಸರಿಯಲ್ಲ. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ.  ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ತನಿಖೆಯ ಅವಶ್ಯಕತೆಯಿಲ್ಲ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಕಾಂಗ್ರೆಸ್‍ನ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.


    Provided by
    Provided by

    ಸುಳ್ಳು ಹೇಳಿಕೆ: ಕಾಂಗ್ರೆಸ್ ನಾಯಕರಿಗೆ  ದುಡ್ಡು ಸಂಗ್ರಹಿಸುವ ಗುರಿ ನೀಡಿರುವುದಾಗಿ ಬಿಜೆಪಿಯ ಸಿ.ಟಿ.ರವಿಯವರು ಮಾಡಿರುವ ಆರೋಪಕ್ಕೆ ಪ್ರತಿಕ್ರಯಿಸುತ್ತಾ, ಸಿ.ಟಿ.ರವಿಯವರ ಹೇಳಿಕೆಗಳು ಸದಾ ಸುಳ್ಳಿನಿಂದ ಕೂಡಿರುತ್ತದೆ. ಅವರ ಸುಳ್ಳು ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ. ಈ ರೀತಿಯ ಎಲ್ಲ ಆರೋಪಗಳು ಸುಳ್ಳು  ಮತ್ತು ಆಧಾರರಹಿತವಾಗಿದೆ ಎಂದರು.

    ರೈತರಿಗೆ 5 ಗಂಟೆಗಳ ಕಾಲ ಸತತ ವಿದ್ಯುತ್ ಸರಬರಾಜು: ಗ್ರಾಮೀಣ ಭಾಗಕ್ಕೆ ವಿದ್ಯುತ್ ಸಮರ್ಪಕವಾಗಿ ಸರಬರಾಜಾಗುತ್ತಿಲ್ಲವೆಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ಹೊರತುಪಡಿಸಿದರೆ, ನಂತರದ ಬಿಜೆಪಿ ಅಥವಾ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಒಂದು ಮೆ.ವ್ಯಾಟ್ ವಿದ್ಯುತ್ತನ್ನೂ ಉತ್ಪಾದನೆ ಮಾಡಿಲ್ಲ. ಮಳೆ ಅಭಾವದಿಂದಾಗಿ ಪಂಪಸೆಟ್ ಗಳಿಗೆ ವಿದ್ಯುತ್ ವ್ಯತ್ಯಯವಾಗಿದೆ. ಸಾಧಾರಣವಾಗಿ, ಅಕ್ಟೋಬರ್ ಮಾಹೆಯವರೆಗೆ 10,000 ಮೆ.ವ್ಯಾ ವಿದ್ಯುತ್ ಖರ್ಚಾಗುತ್ತಿತ್ತು. ಆದರೆ ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ. ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಆದ್ದರಿಂದ ವಿದ್ಯುತ್ ಸಮಸ್ಯೆ ತಲೆದೋರಿರುವುದು ನಿಜ. ಈ ಬಗ್ಗೆ ಸಭೆ ನಡೆಸಿ, ರೈತರಿಗೆ ಮೂರು ಫೇಸ್ ಗಳಲ್ಲಿ 5 ಗಂಟೆಗಳ ಕಾಲ ಸತತ ವಿದ್ಯುತ್ ನೀಡಬೇಕು. ಹೊರಗಿನಿಂದ ವಿದ್ಯುತ್ ಖರೀದಿಸಲು ಸೂಚನೆ ನೀಡಲಾಗಿದೆ.  ಕಬ್ಬು ಅರೆಯುವಿಕೆಯಿಂದ ವಿದ್ಯುತ್ ಕೋ ಜನರೇಷನ್ ನತ್ತಲೂ ಗಮನ ಹರಿಸಲು ಸೂಚಿಸಲಾಗಿದೆ. ಲೋಡ್ ಶೆಡ್ಡಿಂಗ್ ನಿಂದ ರೈತರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

    ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆ ತೊಂದರೆಯಾಗದಂತೆ ಕ್ರಮ: ಜಾನುವಾರುಗಳಿಗೆ ಮೇವಿನ ಕೊರತೆ ಆಗುತ್ತಿರುವ ಬಗ್ಗೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿ, ಪ್ರಸ್ತುತ ಮೇವಿನ ಕೊರತೆಯಿಲ್ಲ. ಆದರೂ ಮೇವು ಬೆಳೆಸಲು ಹಾಗೂ ಶೇಖರಣೆಗೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. 236 ತಾಲ್ಲೂಕುಗಳಲಿ 216 ತಾಲ್ಲೂಕುಗಳು ಬರಪೀಡಿತವಾಗಿದೆ. ವಾಸ್ತವವಾಗಿ 42 ಸಾವಿರ ಹೆಕ್ಟೇರ್‍ನಲ್ಲಿ ಬೆಳೆಹಾನಿಯಾಗಿದ್ದು, 30 ಸಾವಿರ ಕೋಟಿಯಷ್ಟು ನಷ್ಟವಾಗಿದೆ, ಕೇಂದ್ರದ ಮಾರ್ಗಸೂಚಿಯಂತೆ 4860 ಕೋಟಿ ರೂ. ಪರಿಹಾರ ಮೊತ್ತ ಕೋರಲಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ, ಖಾಸಗಿ ಕೊಳವೆಬಾವಿಗಳನ್ನು ಬಳಸಬೇಕು. ಅಗತ್ಯವಿದ್ದಲ್ಲಿ ಹೊಸ ಕೊಳವೆಬಾವಿಗಳನ್ನು ಕೊರೆಯಲು ಸಹ ತಿಳಿಸಲಾಗಿದೆ. ಒಟ್ಟಾರೆ ಜನರ ಕೈಗೆ ಕೆಲಸ,  ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    ದಸರಾ ಉದ್ಘಾಟನೆಯ ಸಂದರ್ಭದಲ್ಲಿ ಶ್ರೀ ಹಂಸಲೇಖರವರು ಚಾಮುಂಡಿ ಬೆಟ್ಟಕ್ಕೆ ಶಾಶ್ವತ ದೀಪಾಲಂಕಾರವಾಗಬೇಕೆನ್ನುವ ಆಶಯವನ್ನು ವ್ಯಕ್ತಪಡಿಸಿರುವ ಬಗ್ಗೆ ಮಾತನಾಡುತ್ತಾ, ಈ ಬಗ್ಗೆ ನಿನ್ನೆಯ ದಿನ ಅವರು ತಮ್ಮ ದಸರಾ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ತುಮಕೂರು: ನಗರದ ಕನ್ನಡ ಭವನದಲ್ಲಿ ಕನ್ನಡ ಪರ ಸಂಘಟನೆಯಾದ ವಿಜಯ ಸೇನೆ ವತಿಯಿಂದ ಆಯೋಜಿಸಲಾಗಿದ್ದ ವೀರ ರಾಣಿ ಬೆಳವಾಡಿ ಮಲ್ಲಮ್ಮ…

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.