ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದಲ್ಲಿ ಚಿರತೆ ಸೆರೆಯಾಗಿದ್ದು, ಈ ಚಿರತೆಯು ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಓಡಾಡುತ್ತಿತ್ತು ಎನ್ನಲಾಗಿದೆ. ಚಿರತೆ ಭಯದಿಂದ ಮನೆಯಿಂದ ಹೊರಗೆ ಬರಲು, ಜಮೀನುಗಳಿಗೆ ಹೋಗಲು ಹೆದರುತ್ತಿದ್ದ ರೈತರು, ಹಸುಗಳನ್ನು ಬಲಿ ಪಡೆದಿದ್ದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆಯು ಸೆರೆಯಾಗಿದೆ.
ಗುಂಡೇಗಾಲದ ಹೊರವಲಯದಲ್ಲಿ ಇಂದು ಬೆಳಗ್ಗೆ ಬೋನಿನೊಳಗೆ ಚಿರತೆಯು ಬಂಧಿಯಾಗಿದ್ದು, ಸ್ಥಳೀಯರು ಕೊನೆಗೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.


