ಮಹಾರಾಷ್ಟ್ರದಲ್ಲಿ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ. ಅಹಮದ್ ನಗರದಿಂದ ಅಷ್ಟಿಗೆ ಹೊರಟಿದ್ದ ಉಪನಗರ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ. ಐದು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.
ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಬೆಂಕಿ ಹರಡುವ ಮುನ್ನವೇ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ.


