1 ರಿಂದ 9ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಅಂಗವಿಕಲ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ವಿನಾಯಿತಿ ನೀಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಪರೀಕ್ಷೆಯಲ್ಲಿ ಸುಧಾರಣೆಗಳು, ವಿನಾಯಿತಿ ಸೌಲಭ್ಯ ನೀಡುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು.
ಈ ಹಿನ್ನೆಲೆ ಸರ್ಕಾರ ವಿನಾಯಿತಿ ನೀಡಿ ಆದೇಶ ಮಾಡಿದ್ದು, ವಿದ್ಯಾರ್ಥಿಗಳು ಅಂಗವಿಕಲತೆ ಪ್ರಮಾಣ ಪತ್ರ ಸಲ್ಲಿಸಿ ಪರೀಕ್ಷಾ ವಿನಾಯಿತಿ ಪಡೆದುಕೊಳ್ಳಬಹುದಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.


