ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಸಮೀಪದ ಕುರುಬರಹಳ್ಳಿಯಲ್ಲಿ ಅಪರಿಚತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಿರ್ಮಾಣ ಹಂತದ ಕಟ್ಟಡದ ಮುಂದೆ ಮರಳಿನ ರಾಶಿ ಹಾಕಲಾಗಿದ್ದು, ಮರಳಿನ ರಾಶಿಯಡಿ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು.
ಮರಳಿನಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರ, ಶವ ಇರುವಿಕೆಯನ್ನು ಪತ್ತೆ ಮಾಡಿ ಪೊಲೀರಿಗೆ ಮಾಹಿತಿ ನೀಡಿದ್ದರು. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.


