ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾದ ಕರ್ನಾಟಕ ಸಂಭ್ರಮ-50ರ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ. ಎನ್.ಮಂಜುಳ, ನಿರ್ದೇಶಕಿ ಡಾ.ಕೆ. ಧಾರಣಣೀದೇವಿ ಮಾಲಗತ್ತಿ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.


