ತುರುವೇಕೆರೆ: ತಾಲೂಕಿನ ಕೋಳಘಟ್ಟ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ದಲಿತ ವ್ಯಕ್ತಿಯ ಮೇಲೆ ನಗಾರಿಯನ್ನು ಹೋರಿಸಿ ಸುವರ್ಣೀಯ ವ್ಯಕ್ತಿಯೊಬ್ಬನು ಅದನ್ನು ಬಾರಿಸಿಕೊಂಡು ಊರಿಲ್ಲ ಸುತ್ತಿರುವ ಘಟನೆ ಸುದ್ದಿಯು ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು, ಈ ಸಂಬಂಧ ತುರುವೇಕೆರೆ ತಾಲೂಕಿನ ದಂಡಾಧಿಕಾರಿಗಳಾದ ವೈ ಎಮ್ ರೇಣು ಕುಮಾರ್ ರವರು ಕೋಳಘಟ್ಟ ಗ್ರಾಮಕ್ಕೆ ಭೇಟಿ ನೀಡಿ ವಸ್ತು ಸ್ಥಿತಿಯನ್ನು ಪರಿಶೀಲನೆ ಮಾಡಿದರು.
ಇದೇ ವೇಳೆ ದಲಿತರು ಮತ್ತು ಸವರ್ಣಿಯರಿಂದ ಹೇಳಿಕೆಗಳನ್ನು ಪಡೆದು ದಲಿತರ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಬೇಕು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರಿಕೆಯಿಂದ ಇರಿ ಹಾಗೇನಾದರೂ ಮುಂದಿನ ದಿನಗಳಲ್ಲಿ ದೌರ್ಜನ್ಯ ಪ್ರಕರಣ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕೇಸು ದಾಖಲು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸೌಹಾರ್ದತೆಯಿಂದ ಜೀವನ ನಡೆಸಲು ಈ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸೌಹಾರ್ದಯತ ಸಭೆ ಹಾಗೂ ಅಸ್ಪೃಶ್ಯತಾ ಅರಿವು ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ