ಬೆಂಗಳೂರು : ಪ್ರವಾಹ, ಅಗ್ನಿ ದುರಂತ, ಕೋಮು ಗಲಭೆ ಹಾಗೂ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ ನೇರವಾಗಲು ‘ಸಾಂತ್ವನ ‘ ಯೋಜನೆ ಆರಂಭಿಸಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ನೂತನ ಯೋಜನೆಗೆ ಚಾಲನೆ ನೀಡಿ, ಪ್ರಕೃತಿ ವಿಕೋಪ ಹಾಗೂ ಕೋಮು ಗಲಭೆ ಯಲ್ಲಿ ಸಂತ್ರಸ್ತರಾಗಿ ಮನೆ ಹಾಗೂ ಅಂಗಡಿ ಕಳೆದುಕೊಳ್ಳುವ ಕುಟುಂಬ ಗಳಿಗೆ ಐದು ಲಕ್ಷ ರೂ. ವರೆಗೆ ಸಾಲ ನೀಡುವ ಯೋಜನೆ ಇದಾಗಿದೆ ಎಂದು ಹೇಳಿದರು.
ಐದು ಲಕ್ಷ ರೂ. ಪೈಕಿ ಶೇ.50 ರಷ್ಟು ಅಂದರೆ 2.50 ಲಕ್ಷ ರೂ. ಸಾಲ, ಉಳಿದ 2.50 ಲಕ್ಷ ಸಬ್ಸಿಡಿ ದೊರೆಯಲಿದ್ದು ಸಾಲಕ್ಕೆ ಶೇ.3 ರಷ್ಟು ಬಡ್ಡಿ ವಿಧಿಸಲಾಗುವುದು. ಈ ಮೊತ್ತದಲ್ಲಿ ಸಂತ್ರಸ್ತ ಕುಟುಂಬಗಳು ವ್ಯಾಪಾರ ಅಥವಾ ಇತರೆ ಉದ್ಯೋಗದಲ್ಲಿ ತೊಡಗಬಹುದುಎಂದು ತಿಳಿಸಿದರು.


