ಬೆಂಗಳೂರು: ರೇಸ್‍ಕೋರ್ಸ್ ರಸ್ತೆಯ ಖನಿಜ ಭವನದ 2ನೇ ಮಹಡಿಯಲ್ಲಿ ಇಂದು ಕರ್ನಾಟಕ ಸರ್ಕಾರದ 5ನೇ ರಾಜ್ಯ ಹಣಕಾಸು ಆಯೋಗದ ಕಾರ್ಯಾಲಯದ ಉದ್ಘಾಟನೆ ಮಾಡಲಾಯಿತು.
ಸಮಾರಂಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಾದ ಕೆ.ಹೆಚ್.ಮುನಿಯಪ್ಪ, ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಮಾಜಿ ಲೋಕಸಭಾ ಸದಸ್ಯರಾದ ಸಿ.ನಾರಾಯಣಸ್ವಾಮಿ, ರಾಜ್ಯ 5ನೇ ಹಣಕಾಸು ಆಯೋಗದ ಸದಸ್ಯರಾದ ಮೊಹಮ್ಮದ್ ಸನಾವುಲ್ಲಾ, ರಾಜ್ಯ ಲೆಕ್ಕ ಪತ್ರ ಇಲಾಖೆ ನಿವೃತ್ತ ನಿಯಂತ್ರಕರು ಹಾಗೂ ಸದಸ್ಯರಾದ ಎಸ್.ಆರ್.ಪೋಂಡೆ, ರಾಜ್ಯ ಹಣಕಾಸು ಆಯೋಗದ ಕಾರ್ಯದರ್ಶಿಗಳಾದ ಉಜ್ವಲ್‍ಕುಮಾರ್ ಘೋಷ್ ಹಾಗೂ ಹಿರಿಯ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ತಮ್ಮ ಕಛೇರಿಯ ಅಧಿಕಾರ ಸ್ವೀಕರಿಸಿದರು.


