ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಬಿಎಂಟಿಸಿ ಸಿಹಿ ಸುದ್ದಿ ನೀಡಿದೆ. ಏಕದಿನ ವಿಶ್ವಕಪ್ ಅಂಗವಾಗಿ ಬೆಂಗಳೂರಿನಲ್ಲಿ ನಡೆಯುವ ಪಂದ್ಯಗಳನ್ನು ವೀಕ್ಷಣೆ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಕೆಟ್ ಪ್ರೇಮಿಗಳು ಆಗಮಿಸಲಿದ್ದಾರೆ.
ಹೀಗಾಗಿ, ಅವರಿಗೆಲ್ಲ ಬಿಎಂಟಿ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ. ಇಂದು(ಅಕ್ಟೋಬರ್ 20), ಅ.26, ನವೆಂಬರ್ 4, ನ.9, ಮತ್ತು ನವೆಂಬರ 12ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ದಿನಗಳಂದು ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ ವಿವಿಧ ಏರಿಯಾಗಳಿಗೆ ಹೆಚ್ಚುವರಿ ಬಸ್ ಗಳು ಓಡಾಡಲಿವೆ.
ಏಕದಿನ ವಿಶ್ವಕಪ್ ನಲ್ಲಿ ಪಾಕಿಸ್ತಾನ ಹಾಗೂ ಅಸ್ಟ್ರೇಲಿಯಾ ನಡುವಿನ ಪಂದ್ಯ ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಹಿನ್ನೆಲೆ, ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಹಾಗೂ ಕೇಂದ್ರ ವಿಭಾಗ ಡಿಸಿಪಿ ಟಿ.ಹೆಚ್ ಶೇಖರ್ ನೇತೃತ್ವದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಹೌದು, ಶ್ವಾನದಳ ಮತ್ತು ಬಾಂಬ್ ಡಿಡೆಕ್ಟರ್ರಿಂದ ಭಧ್ರತಾ ಪರಿಶೀಲನೆ ನಡೆಸಲಾಗಿದೆ. ಕ್ರೀಡಾಂಗಣದಲ್ಲಿ ಒಟ್ಟು 623 ಜನ ಪೊಲೀಸರ ನಿಯೋಜನೆ ಮಾಡಲಾಗಿದೆ.


