ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೈರತಿ ಸುರೇಶ್ ಆಪ್ತನಾದ ಮೌನೇಶ್ ಕುಮಾರ್ ನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಈತನ ಜೊತೆಗೆ ಶಾಮೀಲಾಗಿದ್ದ ಭಗತ್ ಹಾಗೂ ರಾಘವೇಂದ್ರ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಆರೋಪಿಗಳು ಹಣ ಕೊಟ್ಟರೆ ನಕಲಿ ವೋಟರ್ ಐಡಿ, ಆಧಾರ್ ಕಾರ್ಡ್ ಹಾಗೂ ಡಿಎಲ್‍ನ್ನು ಮಾಡಿಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ.