ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ‘ನಾನೊಬ್ಬನೇ’ ಅಧಿಕಾರಕ್ಕೆ ತಂದಿದ್ದೇನೆ ಎಂದು ನಾನು ಎಂದಿಗೂ ಹೇಳಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಡಿ.ಕೆ.ಶಿವಕುಮಾರ್ ಮಾತ್ರ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ ಎಂಬ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಪಕ್ಷವನ್ನು ಏಕಾಂಗಿಯಾಗಿ ಅಧಿಕಾರಕ್ಕೆ ತಂದಿದ್ದೇನೆ ಎಂದು ನಾನೆಂದಿಗೂ ಹೇಳಿಕೊಂಡಿಲ್ಲ. ಭವಿಷ್ಯದಲ್ಲಿಯೂ ಹಾಗೆ ಹೇಳುವುದಿಲ್ಲ ಎಂದು ಅವರು ಹೇಳಿದರು.
ಪಕ್ಷದ ಕಾರ್ಯಕರ್ತರು ಮತ್ತು ಜನರು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ’ ಎಂದ ಅವರು, ಪಕ್ಷದ ಕಾರ್ಯಕರ್ತರು, ನಾವು, ನೀವು (ಸತೀಶ್ ಜಾರಕಿಹೊಳಿ), ರಾಜ್ಯದ ಜನರು, ಪ್ರತಿಯೊಬ್ಬ ಗ್ರಾಮಸ್ಥರು ನಮ್ಮ ಗೆಲುವಿಗೆ ಹೋರಾಡಿದ್ದಾರೆ. ಶಿವಕುಮಾರ್ ಮಾತ್ರ ಪಕ್ಷವನ್ನು ಅಧಿಕಾರಕ್ಕೆ ತಂದಿರುವುದು ಎಂದು ನಾನು ಹೇಳುವುದಿಲ್ಲ’ ಎಂದು ಪುನರುಚ್ಚರಿಸಿದರು.


