ತಿರುವನಂತಪುರಂ: ಕರ್ನಾಟಕದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಗೆ ಪಿಣರಾಯಿ ವಿಜಯನ್ ಅವರು ಸಂಪೂರ್ಣ ಒಪ್ಪಿಗೆ ನೀಡಿದ್ದಾರೆ ಎಂಬ ಎಚ್.ಡಿ.ದೇವೇಗೌಡರ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಗೌಡರ ಹೇಳಿಕೆ ಸಂಪೂರ್ಣ ಅಸಂಬದ್ಧ ಎಂದಿರುವ ಪಿಣರಾಯಿ, ದೇವೇಗೌಡರಂತಹ ಹಿರಿಯ ರಾಜಕಾರಣಿ ಈ ರೀತಿ ಆಧಾರ ರಹಿತ ಸುಳ್ಳುಗಳನ್ನು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.
ಇಂದು ನಡೆದ ಸಿಪಿಎಂ ಸೆಕ್ರೆಟರಿಯೇಟ್ ಸಭೆಯಲ್ಲಿ ಮಾತನಾಡಿದ ಪಿಣರಾಯಿ, ಗೌಡರು ಹೇಳಿಕೊಂಡಂತೆ ನಾನು ಜೆಡಿಎಸ್- ಬಿಜೆಪಿ ಮೈತ್ರಿಗೆ ಒಪ್ಪಿಗೆ ನೀಡಿಲ್ಲ ಎಂದು ಪಿಣರಾಯಿ ವಿವರಿಸಿದರು.


