ತುಮಕೂರು: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರು ನಗರದಲ್ಲಿ ನೆನ್ನೆ ರಾತ್ರಿ ನಡೆದಿದೆ.
ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಮೂಲದ ಮಾರುತಿ ಅಲಿಯಾಸ್ ಫೋಲಾರ್ಡ್ (34) ಕೊಲೆಯಾದ ರೌಡಿಶೀಟರ್ ಆಗಿದ್ದಾನೆ.
ಮಧ್ಯರಾತ್ರಿ ನಗರದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ಮಾರಕಾಸ್ತ್ರಗಳಿಂದ ಕೊಲೆ ಮಾಡಲಾಗಿದೆ. ನಾಲೈದು ಮಂದಿ ದುಷ್ಕರ್ಮಿಗಳು ರೌಡಿ ಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯಾದ ಮಾರುತಿ ತುಮಕೂರಿನ ಮಂಚಲಕುಪ್ಪೆ ಬಳಿ ಪತ್ನಿ ಜೊತೆ ವಾಸವಾಗಿದ್ದನು. ಶನಿವಾರ ರಾತ್ರಿ ಸ್ನೇಹಿತರ ಜೊತೆ ಮದ್ಯ ಸೇವಿಸಿ ಪಾರ್ಟಿ ಮಾಡುತ್ತಿದ್ದಾಗ ರೌಡಿಶೀಟರ್ ಮಾರುತಿ ಮೇಲೆ ದುಷ್ಕರ್ಮಿಗಳಿಂದ ದಾಳಿ ಮಾಡಲಾಗಿದೆ.
ಅನೇಕ ವರ್ಷಗಳ ಹಿಂದೆ ನಡೆದಿದ್ದ ರೌಡಿ ಶೀಟರ್ ಹಟ್ಟಿ ಮಂಜನ ಕೊಲೆ ಕೇಸ್ ಸೇರಿದಂತೆ ಹಲವು ಕೇಸ್‌ಗಳಲ್ಲಿ ಮಾರುತಿ ಆರೋಪಿಯಾಗಿದ್ದನು. ರೌಡಿಶೀಟರ್ ಮಂಜುನಾಥ್ ಅತ್ತೆಯ ಪ್ರತಿಕಾರ ತೀರಿಸಿಕೊಳ್ಳಲು ಆತನ ಕಡೆಯವರೇ ಮಾರುತಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಪ್ರಾಥಮಿ ಪ್ರಾಥಮಿಕ ಮೂಲಗಳಿಂದ ಸ್ಪಷ್ಟವಾಗಿದೆ.
ಈ ಘಟನೆಯೇ ಮಾರುತಿ ಹತ್ಯೆಗೆ ಕಾರಣ ಎಂದು ಅನುಮಾನ ವ್ಯಕ್ತಪಡಿಸಲಾಗಿದ್ದು ಪೊಲೀಸರು ದುಷ್ಕರ್ಮಿಗಳ ಎಡೆಮುರಿ ಕಟ್ಟಲು ತಂಡವನ್ನು ರಚಿಸಿದ್ದಾರೆ. ಘಟನಾ ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್, ಎಎಸ್‌ಪಿ ಮರಿಯಪ್ಪ ಹಾಗೂ ಡಿವೈಎಸ್‌ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಘಟನೆ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.