ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಎಸಗಿದ ಆರೋಪದ ಕುರಿತು ಮಾತನಾಡಿದ ಸಚಿವ ಡಿ.ಸುಧಾಕರ್, ಭಾರತೀಯ ಜನತಾ ಪಕ್ಷದ ಆಂತರಿಕ ವಿಚಾರದ ಬಗ್ಗೆ ಪ್ರತಿಕ್ರಿಯಿಸಲ್ಲ. ಈಗಾಗಲೇ ಕೆಲವರು ಇಂಥದ್ದೇ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ ಎಂದರು.
ಸಚಿವರು, ಕಾಂಗ್ರೆಸ್ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸಿಎಂ, ಡಿಸಿಎಂ ಟೀಂ ಇಲ್ಲ, ಇರುವುದು ಒಂದೇ ಅದು ಕಾಂಗ್ರೆಸ್ ಟೀಂ. ಐದು ವರ್ಷ ಪೂರೈಸಿ ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು.
ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಟಾಂಗ್ ನೀಡಿದ ಅವರು, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಮಾಡಿದ್ದು ನಮ್ಮ ಮೇಲೆ ಹೇಳುತ್ತಿದ್ದಾರೆ. ಕಮಿಷನ್ ಪಡಿಯೋದು, ಕಟ್ ರೂಟ್ ಆಡಳಿತ ಗೊತ್ತಿಲ್ಲ. ರಾಜ್ಯದಲ್ಲಿ ಬರ ಇದೆ, ಡ್ಯಾಂಗಳಲ್ಲಿ ನೀರಿಲ್ಲ, ಕಲ್ಲಿದ್ದಲು ಅಭಾವವಿದೆ. ಕೃತಕವಾಗಿ ವಿದ್ಯುತ್ ಕೊರತೆ ಸೃಷ್ಠಿಸುವ ಪ್ರಶ್ನೆ ಉದ್ಭವಿಸಲ್ಲ ಎಂದರು.


