ಏಷ್ಯನ್ ಪ್ಯಾರಾ ಗೇಮ್ಸ್ 2023ರ ಟಿ 64 ಪುರುಷರ ಹೈ ಜಂಪ್ ಸ್ಪರ್ಧೆಯಲ್ಲಿ ಪ್ರವೀಣ್ ಕುಮಾರ್ ಚಿನ್ನದ ಪದಕ ಗೆದ್ದರೆ, ಉನ್ನಿ ರೇಣು ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಈ ಬಾರಿ ಟಿ -64 ಪುರುಷರ ಹೈ ಜಂಪ್ ಸ್ಪರ್ಧೆಯಲ್ಲಿ ಎರಡು ಪದಕಗಳನ್ನು ಗೆದ್ದಿದೆ.
ಟೋಕಿಯೊ 2021ರಲ್ಲಿ ನಡೆದ ಪ್ಯಾರಾಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ಪ್ರವೀಣ್ ಕುಮಾರ್, ಏಷ್ಯನ್ ಪ್ಯಾರಾ ಗೇಮ್ಸ್ 2023ರಲ್ಲಿ 2.02 ಮೀಟರ್ ಜಿಗಿತದೊಂದಿಗೆ ಚಿನ್ನದ ಪದಕ ಗೆದ್ದಿದ್ದಾರೆ. ಇದೇ ಸ್ಪರ್ಧೆಯಲ್ಲಿ ಉನ್ನಿ ರೇಣು 1.95 ಮೀಟರ್ ಜಿಗಿದು ಕಂಚಿನ ಪದಕ ಗೆದ್ದಿದ್ದಾರೆ.


