ಮಾಜಿ ಸಚಿವ ಹೆಚ್. ಡಿ ರೇವಣ್ಣ ಆಪ್ತ ಅಶ್ವಥ್ ನಾರಾಯಣ್ ಗೌಡನ ಅಪಹರಣ ಯತ್ನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಇನ್ಸ್ ಪೆಕ್ಟರ್ ಅಶೋಕ್, ಭೂಗತ ಪಾತಕಿ ಬಾಂಬೆ ರವಿ ಜೊತೆ ಸಂಪರ್ಕದಲ್ಲಿರುವುದು ಬೆಳಕಿಗೆ ಬಂದಿದೆ.
ಹಫ್ತಾ ವಸೂಲಿ, ಬಡ್ಡಿ ವ್ಯವಹಾರ, ಬೆದರಿಕೆ ಹಾಕಿರುವ ಆರೋಪ ಕೂಡ ಇನ್ಸ್ ಪೆಕ್ಟರ್ ಅಶೋಕ್ ವಿರುದ್ಧ ಕೇಳಿ ಬಂದಿದೆ. ರೇವಣ್ಣ ಆಪ್ತನ ಅಪಹರಣ ಯತ್ನ ಪ್ರಕರಣದಲ್ಲಿ ಲೊಕೇಷನ್ ಸೇರಿದಂತೆ ಪ್ರತಿ ವಿಚಾರದಲ್ಲೂ ಆರೋಪಿಗಳಿಗೆ ಇನ್ಸ್ ಪೆಕ್ಟರ್ ಸಹಾಯ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.


