ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನವಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ. ಈ ಬೆನ್ನಲ್ಲೇ ಜಗ್ಗೇಶ್, ದರ್ಶನ್, ವಿನಯ್ ಗೂರೂಜಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ಬಳಿ ಕೂಡಾ ಹುಲಿ ಉಗುರಿನ ಲಾಕೆಟ್ ಎನ್ನುವ ಕೆಲವು ಫೋಟೋ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದರು ಎನ್ನಲಾದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬಂದಿತ್ತು.
ಈ ವಿಚಾರಕ್ಕೆ ಸಂಬಂಧಿಸಿ ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ʻʻನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇʼʼಎಂದು ನಿಖಿಲ್ ಅವರು ಟ್ವೀಟ್ ಮಾಡಿದ್ದಾರೆ.
ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ.
ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆಂದು ಟ್ವೀಟ್ ಮಾಡಿದ್ದಾರೆ.


