ಚಿಕ್ಕಬಳ್ಳಾಪುರದಲ್ಲಿ ಬಲ್ಕರ್ ಲಾರಿ ಹಾಗೂ ಟಾಟಾ ಸುಮೊ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಹೊರವೊಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಮುಂದೆಯೇ ಈ ದುರ್ಘಟನೆ ಸಂಭವಿಸಿದೆ.
ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಟಾಟಾ ಸುಮೊದಲ್ಲಿದ್ದ ಐವರು ಮೃತಪಟ್ಟಿದ್ದರೆ, ಹಲವರ ಸ್ಥಿತಿ ಚಿಂತಾಜನಕವಾಗಿದೆ.
ದಟ್ಟ ಮಂಜು ಹಿನ್ನೆಲೆ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿದ್ದ ಟಾಟಾ ಸುಮೋದ ಚಾಲಕನಿಗೆ ದಾರಿ ಕಾಣದೆ ಲಾರಿಗೆ ಗುದ್ದಿದ್ದಾನೆ ಎನ್ನಲಾಗಿದೆ.


