ಇಬ್ಬರು ಯುವಕರು ಸಮುದ್ರ ಪಾಲಾಗಿರುವ ಘಟನೆ ಮುರುಡೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಮೃತಪಟ್ಟ ಇಬ್ಬರು ಕೂಡ ಬಾಗಲಕೋಟೆ ಜಿಲ್ಲೆಯವರೆಂದು ತಿಳಿದು ಬಂದಿದೆ.
ಅವರಲ್ಲಿ ಓರ್ವ ಮಂಜುನಾಥ, ಇನ್ನೋರ್ವ ರಮೇಶ ಹಡಪ, ರಜೆಯ ಹಿನ್ನೆಲೆಯಲ್ಲಿ ಮುರುಡೇಶ್ವರದಲ್ಲಿ ಪ್ರವಾಸಿಗರು ಹೆಚ್ಚಿದ್ದು ಸಮುದ್ರಕ್ಕೆ ಇಳಿಯದಂತೆ ಲೈಫ್ ಗಾರ್ಡ್ ಎಷ್ಟೇ ಬಾರಿ ಸೂಚಿಸಿದರೂ ಇದನ್ನು ಧಿಕ್ಕರಿಸಿ ಸಮುದ್ರಕ್ಕೆ ಇಳಿದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.


