ಬಿಎಂಟಿಸಿಎ ಶೇ. 40-50 ರಷ್ಟು ಚಾಲಕರು ಹೃದ್ರೋಗದ ಅಪಾಯದಲ್ಲಿದ್ದಾರೆ. ಅವರು ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ಹೇಳಿದರು.
ಕಳೆದ 12 ರಿಂದ 13 ತಿಂಗಳಲ್ಲಿ ನಮ್ಮ ಆಸ್ಪತ್ರೆಯು 8,200 ಬಿಎಂಟಿಸಿ ಚಾಲಕರಿಗೆ ಹೃದಯ ಸಂಬಂಧಿ ಕಾಯಿಲೆಗಳ ತಪಾಸಣೆ ಮಾಡಿದೆ. ಹೃದಯ ಸಂಬಂಧಿ ಸಮಸ್ಯೆಗಳಿಗಾಗಿ ಚಾಲಕರ ತಪಾಸಣೆ ನಡೆಸಲು ಆಸ್ಪತ್ರೆಯು ಆಗಸ್ಟ್ 2022ರಲ್ಲಿ ಒಪ್ಪಂದವೊಂದಕ್ಕೆ ಸಹಿ ಹಾಕಿತ್ತು ಎಂದು ತಿಳಿಸಿದ್ದಾರೆ.
ಬಿಎಂಟಿಸಿ ಚಾಲಕರು ಅನಿಯಮಿತ ಕೆಲಸದ ಸಮಯ, ಅಸಮರ್ಪಕ ಆಹಾರ ಸೇವನೆ, ವ್ಯಾಯಾಮದ ಕೊರತೆ ಮತ್ತು ದೂರದ ಪ್ರಯಾಣದ ಸಮಯದಲ್ಲಿ ನಿರಂತರವಾಗಿ ಕುಳಿತುಕೊಳ್ಳುವುದರಿಂದ ಆಯಾಸದಿಂದ ಹೃದಯ ಸಂಬಂಧಿ ಕಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಎಂದು ಡಾ. ಸಿ. ಎನ್. ಮಂಜುನಾಥ್ ತಿಳಿಸಿದರು.
ಇದೇ ರೀತಿಯ ಸಮಗ್ರ ಆರೋಗ್ಯ ತಪಾಸಣೆಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಪೊಲೀಸ್ ಸಿಬ್ಬಂದಿಗಳಿಗೂ ನಡೆಸುವ ಪ್ರಸ್ತಾಪ ಮಾಡಲಾಗಿದೆ. ಏಕೆಂದರೆ ಅವರು ಹೃದಯ ಸಂಬಂಧಿ ಸಮಸ್ಯೆಗಳ ಅಪಾಯದಲ್ಲಿದ್ದಾರೆ ಎಂದರು.


