ಹಳ್ಳಿಕಾರ್ ವರ್ತೂರು ಸಂತೋಷ್ ಬಂಧನ ಖಂಡಿಸಿ ರಾಜ್ಯ ವಕ್ನಿಕುಲ ಕ್ಷತ್ರಿಯ ಸಂಘಟನೆಯ ಕಾರ್ಯಕರ್ತರು ಹಾಗೂ ಸಂತೋಷ್ ಅಭಿಮಾನಿಗಳು, ಗ್ರಾಮಸ್ಥರು ವರ್ತೂರಿನ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಅರಣ್ಯಾಧಿಕಾರಿಗಳ ವಿರುದ್ಧ, ಕಪ್ಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದರು. ಹಳ್ಳಿಕಾರ್ ರಾಸುಗಳ ಸಂರಕ್ಷಣೆಯ ಮೂಲಕ ಗುರುತಿಸಿಕೊಂಡಿರುವ ಸಂತೋಷ್ ಅವರನ್ನು ಬಂಧಿಸಿರುವುದು ರೈತರಿಗೆ ಮಾಡುತ್ತಿರುವ ಅಪಮಾನ. ಎಫ್ ಎಸ್ ಎಲ್ ವರದಿ ಬಂದ ನಂತರ ಕ್ರಮ ಕೈಗೊಳಬೇಕು ಎಂದು ಆಗ್ರಹಿಸಿದರು.


