ಜಮ್ಮ–ಕಾಶ್ಮೀರ: ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿರುವ ಘಟನೆ ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಪ್ವಾರಾ ಪೊಲೀಸರು, ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ನೀಡಿದ್ದರು, ಅದರ ಅಧಾರದ ಮೇಲೆ ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಬೋನ್ ಬಝಾರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಗೆ ಇಳಿದಿದ್ದವು. ಈ ಸಂದರ್ಭದಲ್ಲಿ ಉಗ್ರರು ದಾಳಿ ನಡೆಸಿದಾಗ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿರುವುದಾಗಿ ವರದಿ ವಿವರಿಸಿದೆ.
ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ಪೊಲೀಸರು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.


