ಬೆಂಗಳೂರು: ಕುಡಿದ ಅಮಲಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ವಿಭೂತಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ವಿಭೂತಿಪುರದ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ.
ಈಜಲು ಹೋಗುವುದಾಗಿ ಮನೆಯವರಿಗೆ ತಿಳಿಸಿ ಹೊರಟ ಸ್ಯಾಮ್ಯುಯೆಲ್ ಮದ್ಯ ಸೇವಿಸಿದರು ಎಂಬುದು ತಿಳಿದುಬಂದಿದೆ.
ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ದಾರಿಹೋಕರು ರಕ್ಷಣೆಗೆ ಬಂದರೂ ಅವರನ್ನು ಕಾಪಾಡಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಎಚ್ ಎಎಲ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.


