ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಸಿಬ್ಬಂದಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಂತರಾಷ್ಟ್ರೀಯ ಡ್ರಗ್‌ಪ್ಲಡ್ಜರ್‌ಗಳನ್ನು ಒಳಗೊಂಡಂತೆ ಒಟ್ಟು 10 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 5,04,30,000/-ರೂ ಮೌಲ್ಯದ ವಿವಿಧ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ನಗರ ಸಿಸಿಬಿ ಮಾದಕ ದವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಡಗ್ ಪೆಡ್ಲರ್ ಗಳ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಕಳೆದ 15 ದಿನಗಳಲ್ಲಿ ಕಾಡುಗೋಡಿ, ಕೆ.ಆರ್.ಪುರ, ಸೋಲದೇವನಹಳ್ಳಿ, ಹೆಚ್.ಎಸ್.ಆರ್ ಲೇಔಟ್, ವೈಟ್ ಫೀಲ್ಡ್, ಬಾಣಸವಾಡಿ, ಪರಪನ್ನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕ್ಷಿಪ್ರ ಕಾರ್ಯಾಚರಣೆಯನ್ನು ನಡೆಸಿ ದಾಖಲು ಮಾಡಿರುವ 7 ಪ್ರಕರಣಗಳಲ್ಲಿ 8 ಜನ ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 10 ಜನ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಇವರುಗಳ ವಶದಿಂದ ಅಂದಾಜು 5,04,30,000/-ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ ಕಿಸೆಲ್ 3.806 ಕೆಜಿ, ಕೋಕೇನ್-50 ಗ್ರಾಂ, ಎಕ್ಸ್ ಟಿಸಿ ಪಿಲ್ಸ್ 25, ಎಲ್.ಎಸ್.ಡಿ ಸಿಪ್ಸ್-50, 5.100 8. ಕಾರ್-1, ಬೈಕ್-3, ಮೊಬೈಲ್ ಫೋನ್ ಗಳು- ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಬಂಧಿತ ಆರೋಪಿಗಳು ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿ ಮಾಡಿ ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ ಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುತ್ತಾರೆ. ಬಂಧಿತ ಆರೋಪಿಗಳ ವಿರುದ್ಧ ಕಾಡುಗೋಡಿ, ಕೆ.ಆರ್.ಮರ, ಸೋಲದೇವನಹಳ್ಳಿ, ಹೆಚ್.ಎಸ್.ಆರ್ ಲೇಔಟ್, ವೈಟ್ ಫೀಲ್ಡ್, ಬಾಣಸವಾಡಿ, ಪರಪ್ಪನ ಆಗಹಾರ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ-1985 ರೀತಾ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಈ ಕಾರ್ಯಾಚರಣೆಯನ್ನು ಅಪರ ಪೊಲೀಸ್ ಆಯುಕ್ತರು, ಪಶ್ಚಿಮ ಹಾಗೂ ಉಪ ಪೊಲೀಸ್ ಪೊಲೀಸ್ ಆಯುಕ್ತ ಅಪರಾಧ-2 ರವರ ಮಾರ್ಗದರ್ಶನದಲ್ಲಿ ಸಿಸಿಬಿಯ ಮಾದಕ ದ್ರವ್ಯ ಗಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತದೆ.


