ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಈ ವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರೇ,ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ‘ವಿಶಾಲ ಹೃದಯ’ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ?
ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?
ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ?
#AnswerMadiMod ಎಂದು ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನಿಸಿದ್ದಾರೆ.


