ಒಡಿಶಾದ ಗಂಜಾಂ ಜಿಲ್ಲೆಯ ಶೆರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕೃತ್ಯ ನಡೆದಿದೆ. ಮಂಗಳಾ ಭೂಯಾ ಅಲಿಯಾಸ್ ಬಯಾ(25) ಈ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕೆಲವರು ಕಲ್ಲು, ಮಾರಕಾಯುಧಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಮಂಗಳಾ ಭೂಯಾ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಕೊಲೆ ಪ್ರಕರಣದಲ್ಲಿ ಲಂಜಿಯಾಪಲ್ಲಿ ಗ್ರಾಮದ ಐವರನ್ನು ಬಂಧಿಸಲಾಗಿದೆ ಎಂದು ಹೇಳಿದರು.


