ಕರ್ನಾಟಕದ ಬಿಜೆಪಿಯಲ್ಲಿ ಕೆಲ ನಾಯಕರಿಗೆ ಅಹಂಕಾರ ಬಂದಿದೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೋತ ನಾಯಕರನ್ನು ಕರೆದು ಮಾತನಾಡಿಸಬೇಕಿತ್ತು ಎಂದರು. ಈ ಹಿಂದೆ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಆ ಕೆಲಸವನ್ನು ಮಾಡುತ್ತಿದ್ದರು ಎಂದು ಎಂ. ಪಿ ರೇಣುಕಾಚಾರ್ಯಗೆ ಉಲ್ಲೇಖಿಸಿದರು. ಆದರೆ ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿಯಲ್ಲಿ ಇರುವ ನಾಯಕರಿಗೆ ಅಭದ್ರತೆ ಕಾಡುತ್ತಿದೆ. ಹೀಗಿರುವಾಗ ನಾಯಕರು ಪಕ್ಷ ತೊರೆದು ಹೋಗಬಹುದಾದ ಆತಂಕ ಇದೆ ಎಂದು ಹೇಳಿದರು.
ರಾಜ್ಯದಲ್ಲಿ ಅಭದ್ರತೆ ಹಿನ್ನೆಲೆ ಯಾರಾದರೂ ಬಿಜೆಪಿ ತೊರೆದು ಹೋಗಬಹುದು ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಬಿವೈ ವಿಜಯೇಂದ್ರ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದರು. ಪಕ್ಷ ಸಂಘಟನೆ ಆಗಬೇಕಾದರೆ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಎಂಪಿ ರೇಣುಕಾಚಾರ್ಯ ತಿಳಿಸಿದರು.


