ಬೆಂಗಳೂರು: ಡ್ರಗ್ ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ಕಾರ್ಯಾಚರಣೆಯಲ್ಲಿ, ಸಿಸಿಬಿ ಅಧಿಕಾರಿಗಳು ವಿದೇಶಿ ಪ್ರಜೆಗಳು ಸೇರಿದಂತೆ 10 ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. 5.4 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಜಪ್ತಿ ಮಾಡಿದ್ದಾರೆ.
ಸೋಲದೇವನಹಳ್ಳಿ, ಎಚ್‌ಎಸ್‌ಆರ್ ಲೇಔಟ್, ವೈಟ್ ಫೀಲ್ಡ್, ಪರಪ್ಪನ ಅಗ್ರಹಾರ, ಕೆಆರ್ ಪುರಂ, ಕಾಡುಗೋಡಿ ಮತ್ತು ಬಾಣಸವಾಡಿ ಪೊಲೀಸ್ ಠಾಣೆಗಳಲ್ಲಿ ಬಂಧಿತರ ವಿರುದ್ಧ ಏಳು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.


