ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ಎನ್. ಡಿ.ಎ ಒಕ್ಕೂಟಕ್ಕೆ ಕರ್ನಾಟಕದ ಪ್ರಾದೇಶಿಕ ಪಕ್ಷ ಜೆಡಿಎಸ್ ಸೇರಿದ್ದು, ರಾಜಕೀಯ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ದೆಹಲಿಯಲ್ಲಿಂದು ಭೇಟಿಯಾಗಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್- ಬಿಜೆಪಿ (JDS_ BJP) ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ನಿಖಿಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.


