ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಈ ವಿಶೇಷ ಸಂದರ್ಭದ ಹಿನ್ನೆಲೆಯಲ್ಲಿ ವರ್ಷ ಪೂರ್ತಿ ವೈವಿಧ್ಯಮಯ ಆಚರಣೆಗೆ ತೀರ್ಮಾನ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ನ. 1ರಿಂದ 2024ರ ನ. 30ರ ವರೆಗೆ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು-ನುಡಿ, ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದರು.


