nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ

    July 9, 2026
    Facebook Twitter Instagram
    ಟ್ರೆಂಡಿಂಗ್
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    • ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
    • ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
    • ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
    • 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
    • ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
    • ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿಗಣತಿ ವರದಿಯನ್ನು ನಾವು ಸ್ವೀಕರಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
    ರಾಜ್ಯ ಸುದ್ದಿ October 29, 2023

    ಜಾತಿಗಣತಿ ವರದಿಯನ್ನು ನಾವು ಸ್ವೀಕರಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

    By adminOctober 29, 2023No Comments2 Mins Read
    bengaluru 3

    ಬೆಂಗಳೂರು: ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

    ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ” ವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕರೆ ನೀಡಿದರು.

    ನಮಗೆ ಸಹಕರಿಸಿದ ಸಮಾಜದ ಪರವಾಗಿ ನಾವುಗಳು ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದರು.

    ಬ್ರಿಟೀಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಧಿಸಲಾಗಿತ್ತು‌. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದರು. ಈ ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.

    ಸಮುದಾಯದಿಂದ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಅವೈಜ್ಞಾನಿಕ. ಮೆಡಿಕಲ್ ಕಾಲೇಜು ನಡೆಸುವುದು ದುಬಾರಿ ಆದ್ದರಿಂದ ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಸೀಟು ನೀಡಿ ನೆರವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ಯಾರಾ ಮೆಡಿಕಲ್ ಕಾಲೇಜುಗಳನ್ನು, ಹಾಸ್ಟೆಲ್ ಗಳನ್ನು ಮತ್ತು ಐಟಿಐ ಗಳನ್ನು ಸಮಾಜದಿಂದ ಆರಂಭಿಸಿದರೆ ಬಡವರು ಮತ್ತು ಗ್ರಾಮೀಣ ಮಕ್ಕಳಿಗೆ ನೆರವಾಗುತ್ತದೆ ಎಂದರು.

    ನಾನು ಬಿಎಸ್ಸಿ ಓದುವಾಗ ಹೋಟೆಲ್ ನಿಂದ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂಥಾ ಸ್ಥಿತಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ನಾನು ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದೆ ಎಂದು ನುಡಿದರು.

    ಜಾತಿಗಣತಿ ವರದಿ ಸ್ವೀಕರಿಸುತ್ತೇವೆ: ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದರು.

    ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಹಾಗೂ ವಿದ್ಯಾರ್ಥಿ ವೇತನ ವಿತರಿಸುವ ಕಾರ್ಯಕ್ರಮ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.

    ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾರ್ಪೋರೇಟರ್ ಬಿ.ಎನ್.ನಿತೀಶ್ ಪುರುಷೋತ್ತಮ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

     


    Provided by
    Provided by
    admin
    • Website

    Related Posts

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ಕೆಲವೊಮ್ಮೆ ತೀವ್ರವಾದ ಮಸಾಜ್ ಮಾಡಿಸಿಕೊಳ್ಳುವಾಗ, ಮೈತುಂಬಾ ಹಚ್ಚೆ (Tattoos) ಹಾಕಿಸಿಕೊಳ್ಳುವಾಗ ಅಥವಾ ಕಠಿಣವಾದ ಕ್ರೀಡೆಗಳಲ್ಲಿ ತೊಡಗಿಕೊಂಡಾಗ ಉಂಟಾಗುವ ನೋವಿನಲ್ಲಿ ಕೆಲವರು…

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ

    July 9, 2026

    ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ

    July 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.