ನವದೆಹಲಿ: ಕೇರಳದಲ್ಲಿ ಬಾಂಬ್ ಸ್ಪೋಟ ಬಳಿಕ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಕೇರಳದ ಎರ್ನಾಕುಲಂನಲ್ಲಿರುವ ಕಲಮಸರಿಯಲ್ಲಿರುವ ಬೃಹತ್ ಸಮಾವೇಶ ಭವನದಲ್ಲಿ ಬಾಂಬ್ ಸ್ಪೋಟಗೊಂಡು ಒಬ್ಬ ಮಹಿಳೆ ಮೃತಪಟ್ಟಿದ್ದು, 36 ಮಂದಿ ಗಾಯಗೊಂಡಿದ್ದಾರೆ.
ಕೇರಳದ ಬಾಂಬ್ ಸ್ಪೋಟದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರು ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಈಗಾಗಲೇ ಕ್ರಮವಹಿಸಲಾಗಿದೆ.
ಮಡಿಕೇರಿ, ಮೈಸೂರು, ಮಂಗಳೂರು ದಸರಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿತ್ತು. ಮುಂದುವರೆದ ಭಾಗವಾಗಿ ಈಗ ಬಾಂಬ್ ಸೋಟದ ಬಳಿಕ ಮತಷ್ಟು ನಿಗಾ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದಿದ್ದಾರೆ.


