nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 19, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ

    June 19, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ
    • ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್
    • ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
    • ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
    • ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
    • ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದುಬೈನಲ್ಲಿ ನಾಡಪ್ರಭು ಕೆಂಪೇಗೌಡರ ಉತ್ಸವ
    ರಾಷ್ಟ್ರೀಯ ಸುದ್ದಿ October 30, 2023

    ದುಬೈನಲ್ಲಿ ನಾಡಪ್ರಭು ಕೆಂಪೇಗೌಡರ ಉತ್ಸವ

    By adminOctober 30, 2023No Comments2 Mins Read
    kempegowda

    Provided by
    Provided by

    ದುಬೈ: ಉತ್ತಮ ಬದುಕು ರೂಪಿಸಿಕೊಳ್ಳಲು ಹೊರನಾಡಿಗೆ ಬಂದಿರುವ ಕನ್ನಡಿಗರು ನಮ್ಮ ಸಂಸ್ಕೃತಿ, ಭಾಷೆ, ನೆಲ ಜಲದ ಮೇಲೆ ಇರಿಸಿರುವ ಪ್ರೀತಿ, ಬದ್ಧತೆ ಕಂಡು ನನ್ನ ಹೃದಯ ಉಕ್ಕಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

    ಯುಎಇ ಒಕ್ಕಲಿಗರ ಸಂಘ ಇಂದು ಹಮ್ಮಿಕೊಂಡಿದ್ದ ದುಬೈನ ದುಬೈನಲ್ಲಿ ಶೇಕ್ ರಶೀದ್ ಆಡಿಟೋರಿಯಂನಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಹೊರನಾಡಿನಲ್ಲಿ ನೆಲೆಸಿದ್ದರೂ ತಾಯ್ನಾಡಿನ ಪ್ರೇಮ ಉಳಿಸಿಕೊಂಡು, ಕನ್ನಡ ಸೊಗಡನ್ನು ಬದುಕಿನಲ್ಲಿ ಹಾಸುಹೊಕ್ಕಾಗಿಸಿಕೊಂಡು ಬಾಳ್ವೆ ನಡೆಸುತ್ತಿರುವ ಕನ್ನಡಿಗರಿಗೆ ಎಷ್ಟು ಮೆಚ್ಚುಗೆ ವ್ಯಕ್ತಪಡಿಸಿದರೂ ಸಾಲದು. ಈ ದಿನ ನಡೆದ ಕೆಂಪೇಗೌಡರ ಉತ್ಸವದಲ್ಲಿ ಕನ್ನಡ ಸಂಸ್ಕೃತಿಯ ಸೊಗಡು ಸಾಕ್ಷಾತ್ಕಾರವಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

    ನಾಡಪ್ರಭು ಕೆಂಪೇಗೌಡ ಅವರ ಆಡಳಿತ, ದೂರದೃಷ್ಟಿ ಎಲ್ಲೆ, ಸೀಮೆಗಳು ಇಲ್ಲ. ಅವರ ಆದರ್ಶ ಆಡಳಿತ ಎಲ್ಲರೂ ಅನುಕರಣೀಯ ಮಾಡಬೇಕು. ಸರ್ವರನ್ನು ಸಮನಾಗಿ ಕಂಡು ಆಳ್ವಿಕೆ ನಡೆಸಿದವರು. ಅಂತಹವರನ್ನು ಇಂದು ದುಬೈನಲ್ಲಿ ಸ್ಮರಿಸಿಕೊಳ್ಳುಟ್ಟಿರುವುದು ಅರ್ಥಪೂರ್ಣವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

    ಅದಾವ ಶುಭ ಮುಹೂರ್ತದಲ್ಲಿ ನಾಡಪ್ರಭುಗಳು ಬೆಂಗಳೂರು ಮಹಾನಗರಕ್ಕೆ ಅಡಿಪಾಯ ಹಾಕಿದ್ದರು. ಇಂದು ಜಾಗತಿಕ ನಗರವಾಗಿ ಬೆಳೆದಿದ್ದು, ಕರ್ನಾಟಕ ಹಾಗೂ ಭಾರತದ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡುತ್ತಿದೆ. ಜಾಗತಿಕ ಪೈಪೋಟಿ ನೀಡುತ್ತಾ ಜಗತ್ತಿನ ಅತ್ಯುತ್ತಮ ನಗರಗಳಲ್ಲಿ ಒಂದಾಗಿ ಬೆಳೆದಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ನುಡಿದರು.

    ಕೆಂಪೇಗೌಡರ ಅದರ್ಶದೊಂದಿಗೆ ಶ್ರಮಿಸಿದ ನಮ್ಮ ಪೂರ್ವಿಕ ರೈತ ಬಂಧುಗಳು ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ದೊಡ್ಡ ಮಟ್ಟದ ಕೊಡುಗೆ ನೀಡಿದ್ದಾರೆ. ಅದರ ಪರಿಣಾಮವಾಗಿಯೇ ಬೆಂಗಳೂರಿನಲ್ಲಿ ಇವತ್ತಿನ ದಿನ ಆಗುತ್ತಿರುವ ಆರ್ಥಿಕ ಉತ್ಪಾದನೆ ನಾಡಿಗೆ, ದೇಶಕ್ಕೆ ಬೆನ್ನುಲುಬಾಗಿ ನಿಂತಿದೆ. ಇವತ್ತು ದೇಶದ ಜಿಡಿಪಿ ಸದಾ ಏರುಮುಖವಾಗಿ ಚಲಿಸುತ್ತಿದೆ ಎಂದರೆ ಕೆಂಪೇಗೌಡರು ಕಟ್ಟಿದ್ದ ಬೆಂಗಳೂರು ನಗರದ ಕಾಣಿಕೆ ಹಿರಿದು ಎಂದರು ಅವರು.

    ಕೆಂಪೇಗೌಡರು ಕಟ್ಟಿದ ಕೆರೆಗಳು ಏನಾದವು?

    ಇವತ್ತು ನಾವು ಕೆಂಪೇಗೌಡರನ್ನು ಸ್ಮರಣೆ ಮಾಡುತ್ತಿದ್ದೇವೆ. ಆದರೆ, ಅವರು ಬೆಂಗಳೂರಿನಲ್ಲಿ ನಿರ್ಮಿಸಿದ ಕೆರೆಗಳು ಏನಾದವು? ನಮ್ಮ ಸ್ವಾರ್ಥ, ಸಂಕುಚಿತ ಮನಸ್ಥಿತಿಯ ಕಾರಣಕ್ಕೆ ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ಅನೇಕ ಕೆರೆಗಳನ್ನು ನಾಶ ಮಾಡಲಾಗಿದೆ. ಒಂದು ಕಾಲದಲ್ಲಿ ಬೆಂಗಳೂರನ್ನು ಗಾರ್ಡನ್ ಸಿಟಿ ಎಂದು ನಾವೆಲ್ಲರೂ ಹೆಮ್ಮೆಯಿಂದ ಕರೆಯುತ್ತಿದ್ದೆವು. ಈಗ ಗಾರ್ಬೇಜ್ ಸಿಟಿ ಎಂದು ಕರೆಯಲಾಗುತ್ತಿದೆ. ಇದಕ್ಕೆ ಹೊಣೆ ಯಾರು? ಎಂದು ಮಾಜಿ ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದರು.

    ಇವತ್ತು ತಾಂತ್ರಿಕವಾಗಿ ನಾವು ಬಹಳಷ್ಟು ಸಾಧಿಸಿದ್ದೇವೆ. ಚಂದ್ರಯಾನ, ಸೂರ್ಯಯಾನ ಎಂದು ಸಾಧನೆ ಮಾಡುತ್ತಿದ್ದೇವೆ. ಆದರೆ, ಬೆಂಗಳೂರಿನಂಥ ಐತಿಹಾಸಿಕ ನಗರಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಸೋತಿದ್ದೇವೆ. ಇದು ವಿಷಾದನೀಯ. ರಾಜಕಾರಣಿಗಳಾಗಿ ನಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ನಾವೆಲ್ಲೊ ಸೋತಿದ್ದೇವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

    ನಾಡಪ್ರಭು ಕೆಂಪೇಗೌಡರ ಉತ್ಸವದಲ್ಲಿ ಶ್ರೀ ಆದಿಚುಂಚನಗಿರಿ ಮಹಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮಿಗಳವರು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

    ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಶಾಸಕರಾದ ಸಮೃದ್ಧಿ ಮಂಜುನಾಥ್, ಸ್ವರೂಪ್ ಪ್ರಕಾಶ್, ಕೆ ಆರ್ ಪೇಟೆ ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

    ಯುಎಇ ಒಕ್ಕಲಿಗರ ಸಂಘದ ಅಧ್ಯಕ್ಷೆ ರಶ್ಮಿ ನಂದಕಿಶೋರ್, ಉಪಾಧ್ಯಕ್ಷ ಹರೀಶ್ ಕೋಡಿ ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು, ಕನ್ನಡ ಬಂಧುಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

    ಈ ಸಂದರ್ಭದಲ್ಲಿ ದುಬೈ ಕನ್ನಡಿಗರು, ಅದರಲ್ಲಿಯೂ ಮಕ್ಕಳು ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.

     

     

     

     

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ಬೀದರ್: ಜಿಲ್ಲೆಯಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಮತ್ತು ದುರ್ನಡತೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಒಂದೇ ದಿನ ಇಬ್ಬರು ಪಂಚಾಯತ್ ಅಭಿವೃದ್ಧಿ…

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 19, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ

    June 19, 2026

    ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.