ತುಮಕೂರು ಜಿಲ್ಲೆಯಲ್ಲಿ ಮಾಂಸಕ್ಕಾಗಿ ಎಂಟು ಬಾವಲಿಗಳನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಬಂಧಿತರನ್ನು ಮಾಗಡಿ ಪಟ್ಟಣದ ಹೊಂಬಾಳಮ್ಮ ಪೇಟೆ ನಿವಾಸಿಗಳಾದ ರಂಗನಾಥ, ರಾಮಕೃಷ್ಣ, ಶಿವಶಂಕರ ಮತ್ತು ರಂಗ ಎಂದು ಗುರುತಿಸಲಾಗಿದೆ. ಆರೋಪಿಗಳು ಕಡರಾಮನಹಳ್ಳಿಯ ಜಮೀನಿನಲ್ಲಿ ಎಂಟು ಬಾವಲಿಗಳನ್ನು ಕೊಂದಿದ್ದರು.
ಖಚಿತ ಮಾಹಿತಿ ಮೇರೆಗೆ ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಆರೋಪಿಗಳನ್ನು ಹಿಡಿದು ಮಾಂಸಕ್ಕಾಗಿ ಕೊಂದ ಬಾವಲಿಗಳನ್ನು ವಶಪಡಿಸಿಕೊಂಡಿದ್ದಾರೆ.


