ಚಾಮರಾಜನಗರ: ಇಷ್ಟು ದಿನ ಕರ್ನಾಟಕಕ್ಕೆ ಅನ್ಯಾಯವಾಗಿದ್ದು ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದೆಂದು ಚಾಮರಾಜನಗರದಲ್ಲಿ ಕನ್ನಡಪರ ಹೋರಾಟಗಾರರು ಒಂಟಿ ಕಾಲಿನ ಮೇಲೆ ನಿಂತು ಪ್ರತಿಭಟಿಸಿದರು.
ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕಾವೇರಿ ನೀರು ನಿರ್ವಹಣಾ ಮಂಡಲಿಯು ಕರ್ನಾಟಕದ ಪರ ಆದೇಶ ಕೊಡಬೇಕು, ವಸ್ತುನಿಷ್ಠ ಆದೇಶ ಕೊಡಬೇಕು, ನಮಗೇ ನೀರಿಲ್ಲ- ತಮಿಳುನಾಡಿಗೆ ಹೇಗೆ ನೀರು ಕೊಡಲು ಸಾಧ್ಯ ಎಂದು ಧಿಕ್ಕಾರದ ಘೋಷಣೆ ಕೂಗಿದರು.
ಕಳೆದ 48 ದಿನಗಳಿಂದ ಚಾಮರಾಜನಗರದಲ್ಲಿ ಕನ್ನಡಪರ ಹೋರಾಟಗಾರರು ನಿರಂತರವಾಗಿ ಪ್ರತಿಭಟನೆ ಮಾಡಿಕೊಂಡು ಬರುತ್ತಿದ್ದು ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದೆಂದು ಆಗ್ರಹಿಸಿದ್ದಾರೆ.


