ಬೆಂಗಳೂರಿನಲ್ಲಿ ಭಾರೀ ಬೆಂಕಿ ವೀರಭದ್ರನಗರ ಬಳಿಯ ಬಸ್ ಡಿಪೋದಲ್ಲಿ 40ಕ್ಕೂ ಹೆಚ್ಚು ಬಸ್ ಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿಗೆ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
ಆದರೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಬೆಂಕಿ ಅವಘಡದಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.


