ಕನ್ನಡ ದಿನವನ್ನು ಪ್ರತಿ ವರ್ಷ ನವೆಂಬರ್ 1 ರಂದು ಆಚರಿಸಲಾಗುತ್ತದೆ. 1956ರಲ್ಲಿ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಕರ್ನಾಟಕ ರಾಜ್ಯವನ್ನು ರೂಪಿಸಿದ ದಿನ. ಇನ್ನು ರಾಜ್ಯೋತ್ಸವ ಪ್ರಶಸ್ತಿ ಬಗ್ಗೆ ತಿಳಿದುಕೊಳ್ಳುವುದಾದರೆ, ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯೋತ್ಸವದಂದು ಪ್ರಶಸ್ತಿಯನ್ನು ಪ್ರಕಟಿಸಲಾಗುವುದು.
ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರದಿಂದ ನೀಡಲಾಗುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಆಯ್ದು ಅವರಿಗೆ ಈ ಪ್ರಶಸ್ತಿ ನೀಡಲಾಗುವುದು. 1966ರಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಡಲು ಪ್ರಾರಂಭಿಸಲಾಯಿತು.
ಈ ಪ್ರಶಸ್ತಿಯನ್ನು ನವೆಂಬರ್ 1ರಂದು ರಾಜ್ಯದ ಮುಖ್ಯಮಂತ್ರಿಗಳು ಪ್ರದಾನ ಮಾಡುತ್ತಾರೆ. ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಗೌರವಧನ, 25 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.


