ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ಡಿಕೆಶಿ ತಿಹಾರ್ ಜೈಲಿನಲ್ಲಿ ಸೋನಿಯಾಗೆ ಧಮ್ಕಿ ಹಾಕಿದ್ದಾನೆ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಸಿಡಿ ವಿಚಾರವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಸರ್ಕಾರ ನಮ್ಮ ಅರ್ಜಿ ನೆಗ್ಲೆಟ್ ಮಾಡಿದ್ರೆ, ಹೈಕೋರ್ಟ್, ಸುಪ್ರೀಂ ಕೋರ್ಟ್ ಹೋಗುತ್ತೇನೆ ಎಂದರು.


