ಬೆಂಗಳೂರು: ಜಾತಿ ನಿಂದನೆ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಪುನೀತ್ ಕೆರೆಹಳ್ಳಿ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ರಣಧೀರ ಪಡೆಯ ಮುಖಂಡ ಬೈರಪ್ಪ ಹರೀಶ್ ಕುಮಾರ್ ಅವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.
ಫೇಸ್ ಬುಕ್ ನಲ್ಲಿ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಪುನೀತ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ನೀಡಿದ್ದಾರೆ.


