ಬೆಂಗಳೂರು: ಬೆಂಗಳೂರಿನ ಲುಲು ಮಾಲ್ ನಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ವ್ಯಕ್ತಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಬಸವೇಶ್ವರನಗರ ನಿವಾಸಿ ಅಶ್ವಥ್ ನಾರಾಯಣ್ ಎಂದು ಗುರುತು ಪತ್ತೆಯಾಗಿದೆ. ಆದರೆ ಅಶ್ವಥ್ ನಾರಾಯಣ್ ಮನೆಗೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದಾನೆ.
ಆರೋಪಿ ಪ್ರತಿಷ್ಠಿತ ಮಠಕ್ಕೆ ಸೇರಿದ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ನಿವೃತ್ತನಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮಾಗಡಿ ರೋಡ್ ಪೊಲೀಸರು ಆರೋಪಿಯ ಪತ್ತೆಗೆ ಹುಡುಕಾಟ ಮುಂದುವರೆಸಿದ್ದಾರೆ.


