ಬೆಂಗಳೂರು: ಜಾಲಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್ ಎಂಟಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ, ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯೊಂದರ ಎಂಜಿನಿಯರ್ ಮೃತಪಟ್ಟಿದ್ದಾರೆ. ಪೀಣ್ಯ 2ನೇ ಹಂತದ ನಿವಾಸಿ ಸುಭಾಷ್(26) ಮೃತರು.
ಮಂಗಳವಾರ ಬೆಳಿಗ್ಗೆ ಎಲೆಕ್ಟ್ರಿಕ್ ಬೈಕ್ ನಲ್ಲಿ ಎಚ್ ಎಂಟಿ ರಸ್ತೆಯಲ್ಲಿ ತೆರಳುತ್ತಿದ್ದರು. ಆಗ ಅತೀ ವೇಗವಾಗಿ ಬಂದ ವಾಹನಕ್ಕೆ ಡಿಕ್ಕಿಯಾಗಿದೆ. ರಕ್ತಸ್ರಾವದಿಂದ ಬಿದ್ದಿದ್ದ ಸುಭಾಷ್, ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟರು.


